udayanews

ಶನಿವಾರ, ನವೆಂಬರ್ 1, 2025

ವಿಷ ಸೇವಿಸಿ ಕೆರೆಗೆ ಬಿದ್ದು ಯುವಕ ಆತ್ಮಹತ್ಯೆ

 

ಚಿಕ್ಕಮಗಳೂರು: ವಿಷ ಸೇವಿಸಿದ ಬಳಿಕ ಕೆರೆಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಕನ್ಗೆರೆ ಗ್ರಾಮದ ಜೀವಿತ್ (32)  ವಿಷ ಸೇವಿಸಿ ಬಳಿಕ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು

ಶವವನ್ನು ಮೇಲೆತ್ತುವ ಕಾರ್ಯದಲ್ಲಿ ಭಾಗವಹಿಸಿದ್ದರು.


ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

 ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ