ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜು ಎಂದು ಮೂಡಿಗೆರೆ ತಾಲೂಕಿನ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಹಲವು ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಶಾಸಕ ಎಂ ಪಿ ಕುಮಾರಸ್ವಾಮಿ ಜಿಲ್ಲಾಧಿಕಾರಿ ರಮೇಶ್ ಇತರರು ಇದ್ದರು
ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜು ಎಂದು ಮೂಡಿಗೆರೆ ತಾಲೂಕಿನ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಹಲವು ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಶಾಸಕ ಎಂ ಪಿ ಕುಮಾರಸ್ವಾಮಿ ಜಿಲ್ಲಾಧಿಕಾರಿ ರಮೇಶ್ ಇತರರು ಇದ್ದರು
ಉಸಿರಾಟದ ಸಮಸ್ಯೆಯಿಂದ ಮೂಡಿಗೆರೆ ಮೂಲದ ಮಹಿಳೆ ಸಾವು.
ಎರಡು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ
ಇಂದಿರಮ್ಮ(55) ಮೃತ ಪಟ್ಟಿದ್ದಾರೆ.ಪಿ.ಪಿ.ಇ. ಕಿಟ್ ಬಳಸಿ ಮೂಡಿಗೆರೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ. ಕೊರೋನಾ 2ನೇ ಅಲೆಗೆ ಜಿಲ್ಲೆಯಲ್ಲಿ 7 ಮಂದಿ ಸಾವು.
ಜೈಪುರ ಆಟೋ ನಿಲ್ದಾಣದ ಬಳಿ ಹಶಿಶ್ ಮಾರಾಟ ಮಾಡುತ್ತಿದ್ದಾರೆ ಎಂಬ ದೂರು ಆಧರಿಸಿ ಅಬಕಾರಿ ಡಿವೈಎಫ್ ಐ ಪ್ರದೀಪ್ ನೇತೃತ್ವದಲ್ಲಿ ದಾಳಿ ನಡೆಯಿತು .
ವಿಜಯ್ ಎಂಬಾತ ಸೆರೆಸಿಕ್ಕಿತ್ತು ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಸುಮಾರು ೮,೭೫೦ ಗ್ರಾಂ ಗಾಂಜಾ ಹಾಗೂ ೨೦೦ ಗ್ರಾಂ ಹಶಿಶ್ ಪತ್ತೆಯಾಗಿದೆ .
ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಖಾಸಗಿ ಆಸ್ಪತ್ರೆಗಳು ಶೇ. ೫೦% ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು, ಇತರೆ ಖಾಯಿಲೆಗಳಿಗೆ ಸಂಬಂಧಿಸಿದ ರೋಗಿಗಳನ್ನು ನಿರ್ಲಕ್ಷಿಸದೇ ಪರ್ಯಾಯ ಮಾರ್ಗಗಳನ್ನು ರೂಪಿಸಬೇಕು . ಔಷಧಿ ದರಗಳನ್ನು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ದೇವಸ್ಥಾನ, ಮಸೀದಿ, ಚರ್ಚ್ಗಳಿಗೆ ಹೆಚ್ಚಿನ ಜನರು ಭೇಟಿ ನೀಡುವುದರಿಂದ, ಅರ್ಚಕರಿಗೆ, ಮುಲ್ಲಾ, ಫಾದರ್ಗಳಿಗೆ , ಆಟೋ ಚಾಲಕರು, ಕ್ಷೌರಿಕರುಗಳಿಗೂ ಲಸಿಕೆ ನೀಡುವಂತೆ ತಿಳಿಸಿದರು.
ನಿಯಮ ಪಾಲಿಸದ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಕ್ರಮ ಜರುಗಿಸುವಂತೆ ಹೇಳಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ತಹಸೀಲ್ದಾರ್ ಕಾಂತರಾಜ್, ಜಿಲ್ಲಾ ಆರೋಗ್ಯ ಮತ್ತು ಕುಂಟಬ ಕಲ್ಯಾಣಾಧಿಕಾರಿ ಡಾ.ಉಮೇಶ್ ಉಪಸ್ಥಿತರಿದ್ದರು.
.ಸರ್ಕಾರ ಅನುಸರಿಸುತ್ತಿರುವ ಯಾವುದೇ ರೀತಿಯ ದಮನಕಾರಿ ತಂತ್ರಗಳಿಗೆ ಮಣಿಯದೆ ನೌಕರರು ತಮ್ಮ ಪಟ್ಟನ್ನು ಸಡಿಲಿಸದೆ ಮುಷ್ಕರ ಮುಂದುವರಿಸಿದ್ದಾರೆ .ಇಂದು ಆಜಾದ್ ಮೈದಾನದಲ್ಲಿ ತಟ್ಟೆ ಲೋಟ ಬಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನೌಕರರು ಬೇಡಿಕೆ ಈಡೇರುವ ತನಕ ಮುಷ್ಕರ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ .
ಮುಷ್ಕರಕ್ಕೆ ಬಿಜೆಪಿ ಹೊರತುಪಡಿಸಿ ವಿವಿಧ ಪಕ್ಷ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ .ಸರ್ಕಾರ ನೌಕರರ ಮೇಲೆ ಹೇರುತ್ತಿರುವ ಒತ್ತಡವನ್ನು ಮುಖಂಡರು ಖಂಡಿಸಿದ್ದಾರೆ
ಬೀದಿ ನಾಯಿಗಳ ಹಾವಳಿಯಿಂದ ಬೇಸತ್ತ ಜನ ನಗರಸಭೆಗೆ ದೂರನ್ನು ಸಲ್ಲಿಸಿದ್ದರು. ಸಾರ್ವಜನಿಕರ ದೂರು ಆಧರಿಸಿ ನಗರಸಭೆ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆ ಮಾಡಿಸಲು ಆರಂಭಿಸಿದೆ .
ಇಂದಾವರದ ಹೊರವಲಯದಲ್ಲಿ ಈ ಕೆಲಸ ನಡೆಯುತ್ತಿದ್ದು ಸಂತಾನಹರಣ ಚಿಕಿತ್ಸೆಗೆ ಒಳಗಾದ ನಾಯಿಗಳನ್ನು 4ದಿನಗಳ ಬಳಿಕ ಬಿಡಲಾಗುವುದು ಎಂದು ನಗರಸಭೆ ಆಯುಕ್ತ ಬಸವರಾಜ್ ತಿಳಿಸಿದ್ದಾರೆ
ಚಿಕ್ಕಮಗಳೂರು : ಸಮೀಪದ ದಾಸರಹಳ್ಳಿ ಕೆರೆ ಕಾಲುವೆ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಉಪವಿಭಾಗಧಿಕಾರಿ ಡಾ.ಹೆಚ್.ಎಲ್ ನಾಗರಾಜ್ ಮಾರ್ಗದರ್ಶನದಲ್ಲಿ ದಾಸರಹಳ್ಳಿ ಕೆರೆ ಸರ್ವೆ ಕಾರ್ಯ ಮುಗಿದಿದ್ದು ಇಂದು
ರೆವಿನ್ಯೂ ಇನ್ಸ್ಪೆಕ್ಟರ್ ಪುಟ್ಟರಾಜು,ಸರ್ವೆಯರ್ ದೊರೆರಾಜು. ವಿಷನ್ ಚಿಕ್ಕಮಗಳೂರು ಟ್ರಸ್ಟ್ ಸದಸ್ಯರು ಹಾಗೂ ಸ್ಥಳೀಯರಯ ಭಾಗವಹಿಸಿದ್ದರು.